ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಿಡೆ ನಿನ್ನ ಪಾದವ | ಶ್ರೀ ಪುರಂದರ ವಿಠಲ | Bide ninna Padava | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಬಿಡೆ ನಿನ್ನ ಪಾದವ ಬಿಂಕವಿನ್ನೇಕೋ | ಕೊಡು ಮನದಿಷ್ಟವ ಕೋಪವಿದೇಕೋ ||ಪ||

ನೀರ ಪೊಕ್ಕರೂ ಬಿಡೆ ಬೆನ್ನಿನೊಳಗೆ ಬಹು ಭಾರ ಪೊತ್ತೆನೆಂದು ಬಿದ್ದರೂ ಬಿಡೆನು |
ಕೋರೆಯ ಮಸೆಯುತ ಕೊಸರಿಕೊಂಡರು ಬಿಡೆನು ಘೋರ ರೂಪವ ತಾಳಿ ಘುರು ಘುರಿಸಲು ನಾ ||೧||

ತಿರುಕನೆಂದರು ಬಿಡೆ ತಿಳಿದು ತಾಯ ಕೊರಳ ತರಿದನೆಂದರು ನಿನ್ನ ನಾ ಬಿಡೆನು ||   
ಪೊರೆಯೆ ಪಿತನ ವಾಕ್ಯ ಕಾಡ ಸೇರಲು ಬಿಡೆ | ಗರಳ ಮಡುವಿನಲ್ಲಿ ಧುಮುಕಿದರೇನು ನಾ ||೨||

ಕಡು ಬತ್ತಲಾಗಿ ಎನ್ನ ಕೈಗೆ ಕಾಸಿಲ್ಲೆಂದರೂ ಒಡನೆ ಹಯವೇರಿ ಓಡಿದರೂ ಬಿಡೆನು ||  
ಪೊಡವಿಯೊಳಗೆ ನಮ್ಮ ಪುರಂದರ ವಿಠಲನೆ ಕಡೆ ಹಾಯಿಸುವ ಭಾರ ನಿನ್ನದಹುದಕೆ ನಾ ||೩||

biDe ninna paadava biMkavinnEkO | koDu manadiShTava kOpavidEkO ||pa||

nIra pokkarU biDe benninoLage bahu bhaara potteneMdu biddarU biDenu | 
kOreya maseyuta kosarikoMDaru biDenu ghOra rUpava taaLi ghuru ghurisalu naa ||1||

tirukaneMdaru biDe tiLidu taaya koraLa taridaneMdaru ninna naa biDenu || 
poreye pitana vaakya kaaDa sEralu biDe | garaLa maDuvinalli dhumukidarEnu naa ||2||

kaDu battalaagi enna kaige kaasilleMdarU oDane hayavEri ODidarU biDenu || 
poDaviyoLage namma puraMdara viThalane kaDe haayisuva bhaara ninnadahudake naa ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru