ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಡಂಗುರವ ಸಾರಿ ಹರಿಯ | ಪುರಂದರ ವಿಠಲ | Dangurava Sari Hariya | Sri Purandara Dasaru


ರಚನೆ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಡಂಗುರವ ಸಾರಿ ಹರಿಯ ಡಿಂಗರಿಗರೆಲ್ಲರು
ಭೂ ಮಂಡಲಕ್ಕೆ ಪಾಂಡುರಂಗ ವಿಠ್ಠಲ ಪರದೈವವೆಂದು || ಪ ||

ಹರಿಯು ಮುಡಿದ ಹೂವು ಹರಿವಾಣದಲ್ಲಿ ಇಟ್ಟುಕೊಂಡು  
ಹರುಷದಿಂದ ಹಾಡಿ ಪಾಡಿ ಕುಣಿದು ಚಪ್ಪಾಳಿಕ್ಕುತ || ೧ ||

ಒಡಲು ಜಾಗಟೆಯ ಮಾಡಿ ನುಡಿವ ನಾಲಿಗೆಯ ಪಿಡಿದು
ಬಿಡದೆ ಢಣಢಣರೆಂದು ಬಡಿದು ಚಪ್ಪಾಳಿಕ್ಕುತ || ೨ ||

ಇಂತು ಸಕಲ ಲೋಕಕ್ಕೆಲ್ಲ ಲಕ್ಷ್ಮೀಕಾಂತನಲ್ಲದಿಲ್ಲವೆಂದು
ಸಂತತ ಶ್ರೀಪುರಂದರ ವಿಠಲನೇ ಪರದೈವವೆಂದು || ೩ ||

DaMgurava sAri hariya DiMgarigarellaru
BU maMDalakke pAMDuraMga viThThala paradaivaveMdu || pa ||

hariyu muDida hUvu harivANadalli iTTukoMDu
haruShadiMda hADi pADi kuNidu cappALikkuta || 1 ||

oDalu jAgaTeya mADi nuDiva nAligeya piDidu
biDade DhaNaDhaNareMdu baDidu cappALikkuta || 2 ||

iMtu sakala lOkakkella lakShmIkAMtanalladillaveMdu
saMtata SrIpuraMdara viThalanE paradaivaveMdu || 3 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru