ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಎಂತು ವರ್ಣಿಪೆ ನಮ್ಮಮ್ಮಾ | ಶ್ರೀ ವಿಜಯ ದಾಸರು | Enthu Varnipe Nammamma | Sri Vijaya Dasaru


ರಚನೆ : ಶ್ರೀ ವಿಜಯ ದಾಸರು
Kruti: Sri Vijaya Dasaru


ಎಂತು ವರ್ಣಿಪೆ ನಮ್ಮಮ್ಮಾ
ಯಂತ್ರೋದ್ಧಾರಕನಾಗಿ ಮೆರೆವನಾ ||ಪ||

ಕೋತಿ ರೂಪದಲ್ಲಿ ಬಂದು
ಭೂತಳಕೆ ಬೆಡಗು ತೋರಿ
ಈ ತುಂಗಭದ್ರೆಯಲ್ಲಿ
ಖ್ಯಾತಿಯಾಗಿಪ್ಪ ಯತಿಯಾ ||೧||

ಸುತ್ತಲು ವಾನರ ಬದ್ಧ
ಮತ್ತೆ ವಲಯಾಕಾರ ಮಧ್ಯ
ಚಿತ್ರಕೋಣ ಅದರೊಳು
ನಿತ್ಯದಲಿಯಿಪ್ಪ ಯತಿಯಾ ||೨||

ವ್ಯಾಸ ಮುನಿರಾಯರಿಂದ
ಈ ಶಿಲೆಯೊಳಗೆ ನಿಂದು
ಶ್ರೀಶ ವಿಜಯವಿಠ್ಠಲನ್ನ
ಏಸು ಬಗೆ ತುತಿಪನ್ನ ||೩||

eMtu varNipe nammammaa
yaMtrOddhaarakanaagi merevanaa ||pa||

kOti rUpadalli baMdu
bhUtaLake beDagu tOri
I tuMgabhadreyalli
khyaatiyaagippa yatiyaa ||1||

suttalu vaanara baddha
matte valayaakaara madhya
citrakONa adaroLu
nityadaliyippa yatiyaa ||2||

vyaasa muniraayariMda
I shileyoLage niMdu
SrISa vijayaviThThalanna
Esu bage tutipanna ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru