ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಗುಮ್ಮನ ಕರೆಯದಿರೆ | ಶ್ರೀ ಪುರಂದರ ವಿಠಲ | Gummana Kareyadire | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಗುಮ್ಮನ ಕರೆಯದಿರೆ | ಅಮ್ಮಾ ನೀನು ||ಪ||

ಸುಮ್ಮನೆ ಇದ್ದೇನು ಅಮ್ಮಿಯ ಬೇಡೆನು |
ಮಮ್ಮು ಉಣ್ಣುತ್ತೇನೆ ಅಮ್ಮಾ ಅಳುವುದಿಲ್ಲ ||ಅಪ||

ಹೆಣ್ಣುಗಳಿರುವಲ್ಲಿಗೆ ಹೋಗಿ ಅವರ ಕಣ್ಣು ಮುಚ್ಚುವುದಿಲ್ಲವೆ ||
ಚಿಣ್ಣರ ಬಡಿಯೆನು ಅಣ್ಣನ ಬಯ್ಯೆನು ಬೆಣ್ಣೆಯ ಬೇಡೆನು ಮಣ್ಣು ತಿನ್ನುವುದಿಲ್ಲ ||೧||

ಬಾವಿಗೆ ಹೋಗೆ ಕಾಣೆ ಅಮ್ಮಾ ನಾನು ಹಾವಿನೊಳಾಡೆ ಕಾಣೆ ||
ಆವಿನ ಮೊಲೆಯೂಡೆ ಕರುಗಳ ಬಿಡೆನೋಡೆ ದೇವರಂತೆ ಒಂದು ಠಾವಿಲಿ ಕೂಡುವೆ ||೨||

ಮಗನ ಮಾತನು ಕೇಳುತ ಗೋಪಿದೇವಿ | ಮುಗುಳು ನಗುವ ನಗುತಾ ||
ಜಗದೊಡೆಯ ಶ್ರೀ ಪುರಂದರ ವಿಠಲನ ಬಿಗಿದಪ್ಪಿಕೊಂಡಳು ಮೋಹದಿಂದಾಗ ||೩||

gummana kareyadire | ammA nInu ||pa||
 
summane iddEnu ammiya bEDenu |
mammu uNNuttEne ammA aLuvudilla ||apa||
 
heNNugaLiruvallige hOgi avara kaNNu muccuvudillave ||
ciNNara baDiyenu aNNana bayyenu beNNeya bEDenu maNNu tinnuvudilla ||1||
 
bAvige hOge kANe ammA nAnu hAvinoLaaDe kANe ||
Avina moleyUDe karugaLa biDenODe dEvaraMte oMdu ThAvili kUDuve ||2||
 
magana mAtanu kELuta gOpidEvi | muguLu naguva nagutA ||
jagadoDeya SrI puraMdara viThalana bigidappikoMDaLu mOhadiMdAga ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru