ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಮೆಲ್ಲ ಮೆಲ್ಲನೆ ಬಂದನೆ | ಪುರಂದರ ವಿಠಲ | Mella Mellane Bandane | Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಮೆಲ್ಲ ಮೆಲ್ಲನೆ ಬಂದನೆ ಗೋಪಮ್ಮ ಕೇಳೆ| ಮೆಲ್ಲ ಮೆಲ್ಲನೆ ಬಂದನೆ |ಪ|
ಮೆಲ್ಲ ಮೆಲ್ಲನೆ ಬಂದು ಗಲ್ಲಕೆ ಮುದ್ದು ಕೊಟ್ಟು ನಿಲ್ಲದೆ ಓಡಿ ಹೋದ ಕಳ್ಳಗೆ ಬುದ್ಧಿ ಹೇಳೆ |ಅಪ|

ಹಾಲು ಮಾರಲು ಹೋದರೆ ನಿನ್ನಯ ಕಂದ ಕಾಲಿಗಡ್ಡವ ಕಟ್ಟಿದ|
ಹಾಲ ಸುಂಕವ ಬೇಡಿ ಕೋಲನೆ ಅಡ್ಡಗಟ್ಟಿ ಶ್ಯಾಲೆಯ ಸೆಳಕೊಂಡು ಹೇಳದೋಡಿದ ಕೃಷ್ಣಾ |೧|

ಮೊಸರು ಮಾರಲು ಹೋದರೆ ನಿನ್ನಯ ಕಂದ ಹೆಸರೇನೆಂದು ಕೇಳಿದ|
ಹಸನಾದ ಹೆಣ್ಣ ಮೇಲೆ ಕುಸುಮವ ತಂದಿಕ್ಕಿ ಶಶಿಮುಖಿಯರಿಗೆಲ್ಲಾ ಬಸಿರು ಮಾಡಿದನೀತ |೨|  

ಪೋಗೀರೆ ರಂಗಯ್ಯನ ಮೇಲೆ ನೀವು ದೂರೇನು  ಕೊಂಡು ಬಂದಿರೆ
ಯೋಗೀಶ ಪುರಂದರ ವಿಠಲ ರಾಯನ ತೂಗಿ ಪಾಡಿರೆ ಬೇಗ ನಾಗವೇಣಿಯರೆಲ್ಲ |೩|

mella mellane baMdane gOpamma kELe| mella mellane baMdane |pa|
mella mellane baMdu gallake muddu koTTu nillade ODi hOda kaLLage buddhi hELe |apa|
 
hAlu mAralu hOdare ninnaya kaMda kAligaDDava kaTTida|
hAla suMkava bEDi kOlane aDDagaTTi SyAleya seLakoMDu hELadODida kRuShNA |1|
 
mosaru mAralu hOdare ninnaya kaMda hesarEneMdu kELida|
hasanAda heNNa mEle kusumava taMdikki SaSimuKiyarigellA basiru maaDidanIta |2|  
 
pOgIre raMgayyana mEle nIvu dUrEnu  koMDu baMdire
yOgISa puraMdara viThala rAyana tUgi pADire bEga nAgavENiyarella |3|

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru