ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನಮೋ ಪಾರ್ವತಿ ಪತಿನುತ | ಶ್ರೀ ವ್ಯಾಸರಾಜರ ಕೃತಿ | Namo Parvati | Sri Vyasarajara Kruti


ಸಾಹಿತ್ಯ : ಶ್ರೀ ವ್ಯಾಸರಾಜರು  (ಶ್ರೀ ಕೃಷ್ಣ)
Kruti: Sri Vyasarajaru (Sri Krishna)


ನಮೋ ಪಾರ್ವತಿ ಪತಿನುತಜನಪರ ನಮೋ ವಿರೂಪಾಕ್ಷ ||ಪ||
ರಮಾರಮಣನಲ್ಲಮಲ ಭಕುತಿ ಕೊಡು ನಮೋ ವಿಶಾಲಾಕ್ಷ ||ಅಪ||

ನೀಲಕಂಠ ತ್ರಿಶೂಲ ಢಮರು ಹಸ್ತಾಲಂಕೃತ ರಕ್ಷಾ |
ಫಾಲನೇತ್ರ ಕಪಾಲ ರುಂಡಮಣಿ ಮಾಲಾದೃತ ವಕ್ಷಾ ||
ಶೀಲರಮ್ಯ ವಿಶಾಲ ಸುಗುಣ ಸಲ್ಲೀಲ ಸುರಾಧ್ಯಕ್ಷ |   
ಶ್ರೀಲಕುಮೀಶನ ಓಲೈಸುವ ಭಕ್ತಾವಳಿಗಳ ಪಕ್ಷ ||೧||

ವಾಸವನುತ ಹರಿದಾಸ ಈಶ ಕೈಲಾಸವಾಸ ದೇವ |
ದಾಶರಥಿಯ ಔಪಾಸಕ ಸುಜನರ ಪೋಷಿಪ ಪ್ರಭಾವ ||
ಭಾಷಿಸುತಿಹೆ ಅಸತ್ವ ಜೀವರಿಗೆ ಈಶನೆಂಬ ಭಾವ |
ಶ್ರೀಶನಲ್ಲಿ ಕೀಲಿಸು ಮನವ ಗಿರಿಜೇಶ ಮಹಾದೇವ ||೨||

ಮೃತ್ಯುಂಜಯ ನಿನ್ನುತ್ತಮ ಪದಯುಗ ಭೃತ್ಯನೋ ಸರ್ವತ್ರ |
ಹತ್ತಿರ ಕರೆದು ಅಪತ್ಯನಂತೆ ಪೊರೆಯುತ್ತಿರೋ ತ್ರಿನೇತ್ರ ||
ತೆತ್ತಿಗನಂತೆ ಕಾಯುತ್ತಿಹೆ ಬಾಣದ ಸತ್ಯದಿ ಸುಚರಿತ್ರ |  
ಕರ್ತೃ ಉಡುಪಿ ಸರ್ವೋತ್ತಮ ಶ್ರೀ ಕೃಷ್ಣನ ಪೌತ್ರ ಕೃಪಾಪಾತ್ರ ||೩||

namO pArvati patinutajanapara namO virUpAkSha ||pa||
ramAramaNanallamala Bakuti koDu namO viSAlAkSha ||apa||
 
nIlakaMTha triSUla Dhamaru hastAlaMkRuta rakShA |
PAlanEtra kapAla ruMDamaNi mAlAdRuta vakShA ||
SIlaramya vishaala suguNa sallIla surAdhyakSha |
SrIlakumISana Olaisuva BaktAvaLigaLa pakSha ||1||
 
vAsavanuta haridAsa ISa kailAsavAsa dEva |
dASarathiya aupAsaka sujanara pOShipa praBAva ||
BAShisutihe asatva jIvarige ISaneMba BAva |
SrISanalli keelisu manava girijESa mahAdEva ||2||
 
mRutyuMjaya ninnuttama padayuga BRutyanO sarvatra |
hattira karedu apatyanaMte poreyuttirO trinEtra ||
tettiganaMte kAyuttihe bANada satyadi sucaritra |
kartRu uDupi sarvOttama SrI kRuShNana pautra kRupApAtra ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru