ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಊಟಕ್ಕೆ ಬಂದೆವು ನಾವು | ಪುರಂದರ ವಿಠಲ | Ootakke Badevu Navu | Sri Purandara Dasaru


ರಚನೆ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಊಟಕ್ಕೆ ಬಂದೆವು ನಾವು  | ನಿನ್ನ ಆಟ ಪಾಠವ ಬಿಟ್ಟು ಅಡುಗೆ ಮಾಡಮ್ಮ ||ಪ||

ಕತ್ತಾಲಿಟ್ಟಾವಮ್ಮ ಕಣ್ಣು ಬಾಯಿ ಬತ್ತಿ ಬರುತಲಿದೆ ಕೈಕಾಲು ಝುಮ್ಮು ||
ಹೊತ್ತು ಹೋಗಿಸಬೇಡವಮ್ಮ ಒಂದು | ತುತ್ತಾದರೂ ಇತ್ತು ಸಲಹೋ ನಮ್ಮಮ್ಮ ||೧||

ಒಡಲೊಳಗೆ ಉಸಿರಿಲ್ಲ ಒಂದು ಕ್ಷಣವಾದರೆ ಜೀವ ನಿಲ್ಲುವುದಿಲ್ಲ ||
ಮಡಿದರೆ ದೋಷ ತಟ್ಟುವುದು ಒಂದು ಹಿಡಿ ಅಕ್ಕಿಯಿಂದಲೆ ಕೀರ್ತಿ ಬಾಹೋದು ||೨||

ಹೊನ್ನುರಾಶಿಯ ತಂದುಸುರಿಯೆ ಕೋಟಿಕನ್ನಿಕೆಯರ ತಂದು ಧಾರೆಯನೆರೆಯೆ ||
ಅನ್ನದಾನಕ್ಕಿನ್ನು ಸರಿಯೆ ಪ್ರಸನ್ನ ಪುರಂದರವಿಠಲ ದೊರೆಯೆ ||೩||

UTakke baMdevu nAvu | ninna ATa pAThava biTTu aDuge mADamma ||pa||

kattAliTTAvamma kaNNu bAyi batti barutalide kaikAlu Jummu ||
hottu hOgisabEDavamma oMdu | tuttAdarU ittu salahO nammamma ||1||

oDaloLage usirilla oMdu kShaNavAdare jIva nilluvudilla ||
maDidare dOSha taTTuvudu oMdu hiDi akkiyiMdale kIrti bAhOdu ||2||

honnurASiya taMdusuriye kOTikannikeyara taMdu dhAreyanereye ||
annadAnakkinnu sariye prasanna puraMdaraviThala doreye ||3||


Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru