ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಪೋಗದಿರೆಲೊ ರಂಗಾ | ಪುರಂದರ ವಿಠಲ | Pogadirelo Ranga | Sri Purandara Dasaru


ರಚನೆ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಪೋಗದಿರೆಲೊ ರಂಗಾ ಬಾಗಿಲಿಂದಾಚೆಗೆ ||
ಭಾಗವತರು ಕಂಡರೆತ್ತಿಕೊಂಡೊಯ್ವರೊ ||ಅಪ||

ಸುರಮುನಿಗಳು ತಮ್ಮ ಹೃದಯ ಗಹ್ವರದಲ್ಲಿ |
ಪರಮಾತ್ಮನ ಕಾಣದರಸುವರೊ |
ದೊರಕದ ವಸ್ತುವು ದೊರಕಿತು ತಮಗೆಂದು 
ಹರುಷದಿಂದಲಿ ನಿನ್ನ ಕರೆದೆತ್ತಿಕೊಂಬರೊ ||೧||

ಅಗಣಿತ ಗುಣ ನಿನ್ನ ಜಗದನಾರಿಯರೆಲ್ಲ |
ಹಗೆಯಾಗಿ ನುಡಿವರೋ ಗೋಪಾಲನೆ ||
ಮಗುಗಳ ಮಾಣಿಕ್ಯ ತಗಲಿತು ಕರಕೆಂದು ಮಿಗಿಲು 
ಬೇಗದಿಂದಲಿ ಬಂದು ಬಿಗಿದಪ್ಪಿಕೊಂಬರೊ ||೨||

ದಿಟ್ಟ ನಾರಿಯರೆಲ್ಲ ಇಷ್ಟವ ಸಲಿಸೆಂದು |
ಅಟ್ಟಟ್ಟಿ ಬೆನ್ಹಿಂದೆ ತಿರುಗುವರೊ |
ಸೃಷ್ಟೀಶ ಪುರಂದರ ವಿಠಲರಾಯನೆ |
ಇಷ್ಟಿಷ್ಟು ಬೆಣ್ಣೆಯ ಕೊಟ್ಟೇನೊ ರಂಗಯ್ಯ ||೩||

pOgadirelo raMgA bAgiliMdAcege ||
BAgavataru kaMDarettikoMDoyvaro ||apa||
 
suramunigaLu tamma hRudaya gahvaradalli |
paramAtmana kANadarasuvaro |
dorakada vastuvu dorakitu tamageMdu 
haruShadiMdali ninna karedettikoMbaro ||1||
 
agaNita guNa ninna jagadanAriyarella |
hageyaagi nuDivarO gOpAlane ||
magugaLa mANikya tagalitu karakeMdu migilu 
bEgadiMdali baMdu bigidappikoMbaro ||2||
 
diTTa nAriyarella iShTava saliseMdu |
aTTaTTi benhiMde tiruguvaro |
sRuShTISa puraMdara viThalarAyane |
iShTiShTu beNNeya koTTEno raMgayya ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru