ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ವಾದಿರಾಜ ಮುನಿಪ | ಶ್ರೀ ಗೋಪಾಲ ದಾಸರು | Vadiraja Munipa | Sri Gopala Dasaru


ರಚನೆ : ಶ್ರೀ ಗೋಪಾಲ ದಾಸರು (ಗೋಪಾಲ ವಿಠಲ)
Kruti:Sri Gopala Dasaru (Gopala vittala)


ವಾದಿರಾಜ ಮುನಿಪ ಹಯಮುಖ | ಪಾದ ಕಮಲ ಮಧುಪ ||ಪ||

ನೀ ದಯದಲ್ಲಿ ತವ ಪಾದ ಧ್ಯಾನವನು 
ಆದರದಲಿ ಕೊಟ್ಟಾದರಿಸೆನ್ನನು ||ಅಪ||

ಮೂಷಿಕ ಬಿಲದಿಂದ ಉದರ ಪೋಷಕೆ ಬರಲಂದು 
ವಾಸುಕಿ ಭಯದಿ ನಿಮ್ಮಾಸನದೆಡೆ ಬರೆ 
ಕ್ಲೇಶ ಕಳೆದು ಸಂತೋಷಗೈಸಿದೆ ||೧||

ಮುಂದೆ ಭೂತ ನರನಾ ಪ್ರೇರಿಸಿ ಹಿಂದೆವೊಬ್ಬ ನರನಾ
ನಿಂದಿರಿಸಿದೆ ಆನಂದದಿಂದ ಜನ 
ವೃಂದ ನೋಡುತಿರೆ ಅಂದಣ ನಡೆಸಿದ್ಯೋ ||೨||

ಕ್ಷಿತಿಯೊಳು ಸತಿ ತನ್ನಾ ವಲ್ಲಭ ಮೃತಿಯೈದಿರೆ ಮುನ್ನಾ
ಅತಿ ಶೋಕದಿ ಬಂದು ನುತಿಸಲು ಆ
ಪತಿಯನು ಬದುಕಿಸಿ ಹಿತದಿ ರಕ್ಷಿಸಿದೆ || ೩ ||

ನರಪತಿ ವ್ಯಾಧಿಯಲಿ ಬಳಲ್ವದ ತ್ವರಿತದಿ ನೀ ಕೇಳಿ
ಹರುಷದಿ ವ್ಯಾಧಿಯ ಪರಿಹರಿಸ್ಯವನಿಗೆ
ಹರುಷದಿಂದಲಭಯವ ತೋರಿದೆ || ೪ ||

ಶಾಸ್ತ್ರ ಪ್ರಸಂಗದಲಿ ನಾರಾಯಣ ಭೂತರ ಗೆಲಿದಲ್ಲೆ
ಖ್ಯಾತಿಯಿಂದ ಬಹು ಮಾತನಾಡಿ ಶ್ರೀ-
ನಾಥನ ಮಂದಿರ ಪ್ರೀತಿಲಿ ತರಿಸಿದ್ಯೊ || ೫ ||

ತುರಗವದನ ಪಾದಾ ಭುಜಗಳಲಿ
ಧರಿಸಿಕೊಂಡು ಮೋದ ಕಡಲೆ ಮಡ್ಡಿಯನು
ಕರದಿಂದುಣಿಸಿದ ಗುರುವರಶೇಖರ || ೬ ||

ಆ ಮಹಾ ಗೋಪಾಲವಿಠ್ಠಲ ತಾಮರಸದಳಗಳ
ಧೀಮಂತರಿಗೆ ಸುಕಾಮಿತವನು ಕೊಡುವ
ಆ ಮಹಾಮಹಿಮ || ೭ ||

vAdirAja munipa hayamuKa | pAda kamala madhupa ||pa||

nI dayadalli tava pAda dhyAnavanu 
Adaradali koTTAdarisennanu ||apa||

mUShika biladiMda udara pOShake baralaMdu 
vAsuki Bayadi nimmaasanadeDe bare 
klESa kaLedu saMtOShagaiside ||1||
 
muMde BUta naranA prErisi hiMdevobba naranA
niMdiriside AnaMdadiMda jana 
vRuMda nODutire aMdaNa naDesidyO ||2||

kShitiyoLu sati tannaa vallabha mRutiyaidire munnaa
ati shOkadi baMdu nutisalu A
patiyanu badukisi hitadi rakShiside || 3 ||

narapati vyaadhiyali baLalvada tvaritadi nI kELi
haruShadi vyaadhiya pariharisyavanige
haruShadiMdalabhayava tOride || 4 ||

shaastra prasaMgadali naaraayaNa bhUtara gelidalle
KyaatiyiMda bahu maatanaaDi shrI-
naathana maMdira prItili tarisidyo || 5 ||

turagavadana paadaa bhujagaLali
dharisikoMDu mOda kaDale maDDiyanu
karadiMduNisida guruvarashEKara || 6 ||

A mahaa gOpaalaviThThala taamarasadaLagaLa
dhImaMtarige sukaamitavanu koDuva
A mahaamahima || 7 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru