ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಹಿಗ್ಗುವೆ ಯಾಕೋ ಈ ದೇಹಕ್ಕೆ | ಶ್ರೀ ಪುರಂದರ ದಾಸರು | Higguve Yako | Sri Purandara Dasaru


ರಚನೆ :  ಶ್ರೀ ಪುರಂದರ ದಾಸರು 
Krithi : Sri Purandara Dasaru


 ಹಿಗ್ಗುವೆ ಯಾಕೋ ಈ ದೇಹಕ್ಕೆ ಹಿಗ್ಗುವೆ ಯಾಕೋ ||ಪ||

ಹಿಗ್ಗುವ ತಗ್ಗುವ ಮುಗ್ಗುವ ಕುಗ್ಗುವ 
ಅಗ್ನಿಯೊಳಗೆ ಬಿದ್ದು ದಗ್ಧವಾಗುವ ದೇಹಕ್ಕೆ ||ಅಪ||

ಸತಿಪುರುಷರು ಕೂಡಿ ರತಿಕ್ರೀಡೆಗಳ ಮಾಡಿ
ಪತನಾದ ಇಂದ್ರಿಯ ಪ್ರತಿಮೆಯ ದೇಹಕ್ಕೆ ||೧||

ಆಗದ ಭೋಗಗಳನ್ನು ಆಗುಮಾಡುತಲಿದ್ದು
ರೋಗ ಬಂದರೆ ಬಿದ್ದು ಹೋಗುವ ದೇಹಕ್ಕೆ ||೨||

ಪರರ ಸೇವೆಯ ಮಾಡಿ ನರಕಭಾಜನನಾಗಿ
ಮರಳಿ ಮರಳಿ ಬಿದ್ದು ಉರುಳುವ ದೇಹಕ್ಕೆ ||೩||

ಸೋರುವುದೊಂಭತ್ತು ಬಾಗಿಲ ಮಲ
ನೀರಿಲ್ಲದಿದ್ದರೆ ನಾರುವ ದೇಹಕ್ಕೆ ||೪||

ಪುರಂದರವಿಠಲನ ಚರಣಕಮಲಕ್ಕೆ
ಎರಗದೆ ತಿರುಗುವ ಗರುವದ ದೇಹಕ್ಕೆ ||೫||

higguve yaakO I dEhakke higguve yaakO ||pa||

higguva tagguva mugguva kugguva 
agniyoLage biddu dagdhavaaguva dEhakke ||apa||

satipuruSharu kUDi ratikrIDegaLa maaDi
patanaada iMdriya pratimeya dEhakke ||1||

Agada bhOgagaLannu AgumaaDutaliddu
rOga baMdare biddu hOguva dEhakke ||2||

parara sEveya maaDi narakabhaajananaagi
maraLi maraLi biddu uruLuva dEhakke ||3||

sOruvudoMbhattu baagila mala
nIrilladiddare naaruva dEhakke ||4||

puraMdaraviThalana caraNakamalakke
eragade tiruguva garuvada dEhakke ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru