ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಇಂದೀವರಾಕ್ಷಗೆ | ಜಯಮಂಗಳಂ ನಿತ್ಯ | ಶ್ರೀ ಪುರಂದರ ವಿಠಲ | Indivarakshage | Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಜಯಮಂಗಳಂ ನಿತ್ಯ ಶುಭಮಂಗಳಂ 

ಇಂದೀವರಾಕ್ಷಗೆ ಇಭರಾಜ ವರದಗೆ | 
ಇಂದಿರಾರಮಣ ಗೋವಿಂದ ಹರಿಗೆ |
ನಂದನ ಕಂದಗೆ ನವನೀತ ಚೋರಗೆ |
ವೃಂದಾರಕೇಂದ್ರ ಉಡುಪಿಯ ಕೃಷ್ಣಗೆ ||೧|| 

ಕ್ಷೀರಾಬ್ಧಿವಾಸಗೆ ಕ್ಷಿತಿಜನ ಪಾಲಗೆ |  
ಮಾರನ ಪಡೆದ ಮಂಗಳ ಮೂರ್ತಿಗೆ |
ಚಾರುಚರಣಗಳಿಂದ ಚೆಲುವ ಗಂಗೆಯ
ಪಡೆದ ಕಾರುಣ್ಯ ಮೂರ್ತಿ ಕೌಸ್ತುಭಧಾರಿಗೆ ||೨|| 

ವ್ಯಾಸಾವತಾರಿಗೆ ವೇದ ಉದ್ಧಾರಗೆ |  
ವಾಸಿತಾನಂತ ಪದ ಸಕಲೇಶಗೆ
ವಾಸುದೇವ ಮೂರ್ತಿ ಪುರಂದರ ವಿಠಲಗೆ
ದಾಸರ ಕಾಯ್ವ ರುಕ್ಮಿಣಿ ರಮಣಗೆ ||೩|| 

jayamaMgaLaM nithya ShubhamaMgaLaM

iMdIvarAkShage iBarAja varadage | 
iMdirAramaNa gOviMda harige |
naMdana kaMdage navanIta cOrage |
vRuMdArakEMdra uDupiya kRuShNage ||1|| 

kShIrAbdhivAsage kShitijana pAlage |
mArana paDeda maMgaLa mUrtige |
cArucaraNagaLiMda celuva gaMgeya
paDeda kAruNya mUrti kaustuBadhArige ||2|| 

vyAsAvatArige vEda uddhArage |
vAsitAnaMta pada sakalESage
vAsudEva mUrti puraMdara viThalage
dAsara kAyva rukmiNi ramaNage ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru