ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕೈಯ ತೋರೋ ಕರುಣಿ | ಶ್ರೀ ಪುರಂದರ ವಿಠಲ | Kaiya Toro Karuni | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಕೈಯ ತೋರೋ ಕರುಣಿಗಳರಸನೆ ಕೈಯ ತೋರೊ | ಕೈಯಲಿ ತುಂಬಾ ಬೆಣ್ಣೆಯ ಕೊಳುವ ಕೈಯ || ಪ ||

ಅಂಗುಲಿಯೊಳು ಪೊನ್ನುಂಗುರವೊಪ್ಪುವ ಕೈಯ ತೋರೊ |ಶೃಂಗಾರದಿ ಶಂಖಚಕ್ರವ ಧರಿಸಿದ ಕೈಯ ತೋರೊ 
ಅಂಗೈಯಲಿ ಧ್ವಜಪಧ್ಮವಿರಾಜಿಪ ಕೈಯ ತೋರೊ |ಅಂಗನೆಯರಉತ್ತುಂಗಕುಚದಲಿಟ್ಟ ಕೈಯ ತೋರೊ||1||

ಬಡಬ್ರಾಹ್ಮಣನವಲಕ್ಕಿಯ ಬೇಡಿದ ಕೈಯ ತೋರೊ |ಕೊಡೆ ಮಾಡಿ ಗಿರಿಯೆತ್ತಿ ಗೋಗಳ ಕಾಯ್ದ-ಕೈಯ ತೋರೊ 
ಕಡುಹಿರಣ್ಯಾಖ್ಯನ ಒಡಲನು ಬಗೆದ-ಕೈಯ ತೋರೊ |ಧೃಡ ಪ್ರಹ್ಲಾದನ ಮಂಡೆಯೊಳಿಟ್ಟ ಕೈಯ ತೋರೊ||2||

ಅಲ್ಲಿ ಪೂತನಿಯ ಅಸುವನೆ ಹೀರಿದ ಕೈಯ ತೋರೊ |ಬಲ್ಲಿದಮಲ್ಲರ ಮರ್ದಿಸಿ ಬಂದ-ಕೈಯ ತೋರೊ
ಮೆಲ್ಲನೆ ಕುಬುಜೆಯ ಡೊಂಕನೆ ತಿದ್ದಿದ ಕೈಯ ತೋರೊ |ಬಿಲ್ಲನು ಎಡಗೈಯಲಿ ಮುರಿದಿಟ್ಟ ಕೈಯ ತೋರೊ||3||

ಬಲಿಯನು ವಂಚಿಸಿ ದಾನವ ಬೇಡಿದ ಕೈಯ ತೋರೊ |ಫಲಪುಷ್ಪ ಪಾರಿಜಾತವ ತಂದ ಕೈಯ ತೋರೊ
ಒಲಿದು ಪಾರ್ಥಗೆ ರಥವನು ನಡೆಸಿದ ಕೈಯ ತೋರೊ |ಮಲ್ಲಿಗೆ ಜಾಜಿಯ ತುರುಬಿಗೆ ಮುಡಿಸಿದ ಕೈಯ ತೋರೊ ||4||

ಆಕಾಶದ ಚಂದ್ರಮನನು ಕರೆದ-ಕೈಯ ತೋರೊ |ನಾಕಪತಿಗೆ ಅಭಯವನಿತ್ತ-ಕೈಯ ತೋರೊ |
ನೇಕ ಬಗೆಯಲಿ ಕೊಳಲನೂದುವ-ಕೈಯ ತೋರೊ |ಶ್ರೀಕಾಂತ ನಮ್ಮ ಪುರಂದರವಿಠಲ-ಕೈಯ ತೋರೊ ||5||

Kaiya toro karunigalarasa-kaiya toro |kaiyali benneya muddeya niduve-kaiya||pa||

Guliyolu ponnunguravoppuva kaiya toro |srungaradi samkacakrava dharisida kaiya toro 
amgaiyali dhvajapadhmavirajipa kaiya toro |anganeyara^^uttungakucadalitta kaiya toro||1||

Badabrahmananavalakkiya bedida kaiya toro |kode madi giriyetti gogala kayda-kaiya toro 
kaduhiranyakyana odalanu bageda-kaiya toro |dhruda prahladana mandeyolitta kaiya toro||2||

Alli putaniya asuvane hirida kaiya toro |ballidamallara mardisi banda-kaiya toro
Mellane kubujeya Donkane tiddida kaiya toro |billanu edagaiyali muriditta kaiya toro||3||

Baliyanu vancisi danava bedida kaiya toro |palapushpa parijatava tanda kaiya toro
Olidu parthage rathavanu nadesida kaiya toro |mallige jajiya turubige mudisida kaiya toro ||4||

Akasada candramananu kareda-kaiya toro |nakapatige abayavanitta-kaiya toro |
Neka bageyali kolalanuduva-kaiya toro |srikanta namma purandaravithala-kaiya toro ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru