ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಸತ್ಯ ಜಗತಿದು ಪಂಚಭೇದವು | ಶ್ರೀಪುರಂದರ ವಿಠಲ | Satya Jagatidu | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಸತ್ಯ ಜಗತಿದು ಪಂಚಭೇದವು ನಿತ್ಯ ಶ್ರೀ ಗೋವಿಂದನ
ಕೃತ್ಯವರಿತು ತಾರತಮ್ಯದಿ ಕೃಷ್ಣನಧಿಕೆಂದು ಸಾರಿರೈ || ಪ ||

ಜೀವ ಈಶಗೆ ಭೇದ ಸರ್ವತ್ರ ಜೀವ ಜೀವಕೆ ಭೇದವು
ಜೀವ ಜಡಕೆ, ಜಡ ಜಡಕೆ ಭೇದ| ಭೇದ ಜಡ ಪರಮಾತ್ಮಗೆ || ೧ ||

ಮಾನುಷೋತ್ತಮರಧಿಕ ಕ್ಷಿತಿಪರು ಮನುಜ ದೇವ ಗಂಧರ್ವರು
ಪಿತೃ ಅಜಾನಜ ಕರ್ಮಜರು ಉಕ್ತ ಶೇಷ ಶತಸ್ಥರು || ೨ ||

ಗಣಪಮಿತ್ರರು ಸಪ್ತಋಷಿಗಳು ವಹ್ನಿ ನಾರದ ವರುಣರು
ಇನಜಗೆ ಸಮ ಚಂದ್ರ ಸೂರ್ಯರು ಮನುಸತಿಯು ಹೆಚ್ಚು ಪ್ರವಹನು ||  ೩ ||

ದಕ್ಷ ಸಮ ಅನಿರುದ್ಧ ಗುರು ಶಚಿ ರತಿಸ್ವಾಯಂಭುವರಾರ‍್ವರು
ಕಕ್ಷಪ್ರಾಣನಿಗಿಂತ ಕಾಮನು ಕಿಂಚಿದಧಿಕನು ಇಂದ್ರನು || ೪ ||

ದೇವೇಂದ್ರನಿಂದಧಿಕ ಮಹರುದ್ರ ರುದ್ರ ಸಮ ಶೇಷ ಗರುಡರು
ಗರುಡಶೇಷರಿಗಧಿಕರೆನಿಪರು ದೇವಿ ಭಾರತೀ ಸರಸ್ವತೀ || ೫ ||

ವಾಯುವಿಗೆ ಸಮರಿಲ್ಲ ಜಗದೊಳು ವಾಯುದೇವರೆ ಬ್ರಹ್ಮರು
ವಾಯು ಬ್ರಹ್ಮಗೆ ಕೋಟಿ ಗುಣದಿಂದ ಅಧಿಕಶಕ್ತಳು ಶ್ರೀರಮಾ || ೬ ||

ಅನಂತ ಗುಣದಿಂ ಲಕುಮಿಗಧಿಕನು ಶ್ರೀಪುರಂದರ ವಿಠಲನು
ಘನರು ಸಮರು ಇವಗಿಲ್ಲ ಜಗದೊಳು ಹನುಮ ಹೃತ್ಪದ್ಮವಾಸಿಗೆ || ೭ ||

satya jagatidu paMchaBEdavu nitya shrI gOviMdana
kRutyavaritu taaratamyadi kRuShNanadhikeMdu saarirai || pa ||

jIva Ishage bhEda sarvatra jIva jIvake bhEdavu
jIva jaDake, jaDa jaDake bhEda| bhEda jaDa paramaatmage || 1 ||

maanuShOttamaradhika kShitiparu manuja dEva gaMdharvaru
pitRu ajaanaja karmajaru ukta shESha shatastharu || 2 ||

gaNapamitraru saptaRuShigaLu vahni naarada varuNaru
inajage sama caMdra sUryaru manusatiyu heccu pravahanu ||  3 ||

dakSha sama aniruddha guru shaci ratisvaayaMbhuvaraar^varu
kakShapraaNanigiMta kaamanu kiMcidadhikanu iMdranu || 4 ||

dEvEMdraniMdadhika maharudra rudra sama shESha garuDaru
garuDashESharigadhikareniparu dEvi bhaaratI sarasvatI || 5 ||

vaayuvige samarilla jagadoLu vaayudEvare brahmaru
vaayu brahmage kOTi guNadiMda adhikashaktaLu shrIramaa || 6 ||

anaMta guNadiM lakumigadhikanu shrIpuraMdara viThalanu
Ganaru samaru ivagilla jagadoLu hanuma hRutpadmavaasige || 7 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru