ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಸುಳ್ಳು ನಮ್ಮಲ್ಲಿಲ್ಲವಯ್ಯ | ಶ್ರೀ ಪುರಂದರ ದಾಸರು | Sullu Nammallillavayya | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಸುಳ್ಳು ನಮ್ಮಲ್ಲಿಲ್ಲವಯ್ಯ ಸುಳ್ಳೆ ನಮ್ಮನಿ ದೇವರು ||ಪ||

ಇಲಿಯು ಒಲೆಯ ಚಾಚೋದು ಕಂಡೆ ಬೆಕ್ಕು ಬಕ್ಕರಿ ಮಾಡೋದು ಕಂಡೆ 
ಮೆಕ್ಕೆ ಕಾಯಿ ಕಂಡೆನವ್ವ ತೆಕ್ಕೆ ಗಾತರ ||೧||

ಕಪ್ಪೆ ಪಾತರ ಕುಣಿಯೋದ ಕಂಡೆ ಏಡಿ ಮದ್ದಲೆ ಬಡಿವುದ ಕಂಡೆ
ತೊಂಡೇಕಾಯಿ ಕಂಡೆನವ್ವ ಹಂಡೆ ಗಾತರ ||೨||

ಅರಿಶಿನ ಬಿತ್ತೋದು ಕಂಡೆ ಗಸಗಸೆ ಎಣಿಸೋದು ಕಂಡೆ
ಪುರಂದರ ವಿಠಲನ ಪಾದವ ಕಂಡೆ ಪರ್ವತ ಗಾತರ ||೩||

suLLu nammallillavayya suLLe nammani dEvaru ||pa||

iliyu oleya chaacOdu kaMDe bekku bakkari maaDOdu kaMDe 
mekke kaayi kaMDenavva tekke gaatara ||1||

kappe paatara kuNiyOda kaMDe EDi maddale baDivuda kaMDe
toMDEkaayi kaMDenavva haMDe gaatara ||2||

arishina bittOdu kaMDe gasagase eNisOdu kaMDe
puraMdara viThalana paadava kaMDe parvata gaatara ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru