ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ತೊಳಸದಕ್ಕಿಯ ತಿಂಬ | ಶ್ರೀ ವಿಜಯ ವಿಠಲ | Tolasadakkiya Timba | Sri Vijaya Dasaru


ಸಾಹಿತ್ಯ : ಶ್ರೀ ವಿಜಯ ದಾಸರು 
Kruti: Sri Vijaya Dasaru


ಜಯಮಂಗಳಂ ನಿತ್ಯ ಶುಭಮಂಗಳಂ

ತೊಳಸದಕ್ಕಿಯ ತಿಂಬ ಕಿಲುಬು ತಳಿಗೆಯಲುಂಬ
ಕೊಳಗದಲಿ ಹಣಗಳನು ಅಳೆಸಿಕೊಂಬ |
ಇಲ್ಲ ಕಾಸು ಎಂದು ಸುಳ್ಳು ಮಾತಾಡಿದರೆ | 
ಎಲ್ಲವನು ಕಸುಕೊಂಬ ಕಳ್ಳದೊರೆಗೆ ||೧||

ತನ್ನ ನೋಡೇನೆಂದು ಮುನ್ನೂರು ಗಾವುದ ಬರೆ |
ತನ್ನ ಗುಡಿಯ ಪೊಕ್ಕ ಜನರಿಗೆಲ್ಲ |
ಹೊನ್ನು ಹಣಗಳ ಕಸಿದು ತನ್ನ ದರುಶನ ಕೊಡದೆ |
ಬೆನ್ನೊಡೆಯ ಹೊಯ್ಯುವ ಅನ್ಯಾಯಕಾರಿಗೆ ||೨||

ಗಿಡ್ಡ ಹಾರುವನಾಗಿ ಒಡ್ಡಿ ದಾನವ ಬೇಡಿ |
ದುಡ್ಡು ಕಾಸುಗಳಿಗೆ ಕೈಯ ನೀಡಿ ||
ಅಡ್ಡ ಬಿದ್ದ ಜನರ ವಿಡ್ಡೂರಗಳ ಕಳೆದು |
ದೊಡ್ಡವರ ಮಾಳ್ಪ ಸಿರಿ ವಿಜಯ ವಿಠ್ಠಲಗೆ ||೩||

ಜಯ ಮಂಗಳಂ

jayamaMgaLaM nitya SuBamaMgaLaM
 
toLasadakkiya tiMba kilubu taLigeyaluMba
koLagadali haNagaLanu aLesikoMba |
illa kAsu eMdu suLLu mAtADidare | 
ellavanu kasukoMba kaLLadorege ||1||
 
tanna nODEneMdu munnUru gAvuda bare |
tanna guDiya pokka janarigella |
honnu haNagaLa kasidu tanna daruSana koDade |
bennoDeya hoyyuva anyAyakArige ||2||
 
giDDa hAruvanAgi oDDi dAnava bEDi |
duDDu kAsugaLige kaiya nIDi ||
aDDa bidda janara viDDUragaLa kaLedu |
doDDavara mALpa siri vijaya viThThalage ||3||
 
jaya maMgaLaM

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru