ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಆರತಿ ಹಾಡು | ಆನಂದಮಯಗೆ ಚಿನ್ಮಯಗೆ | ಶ್ರೀ ವಾದಿರಾಜರು | Anandamayage Chinmayage | Sri Vadirajaru


ರಚನೆ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಆನಂದಮಯಗೆ ಚಿನ್ಮಯಗೆ ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ ||ಪ||

ವೇದವ ತಂದು ಬೆಟ್ಟವ ಪೊತ್ತು ಧರಣಿಯ ಸಾಧಿಸಿ ಕಂಭದಿ ಬಂದವಗೆ
ಭೂದಾನವ ಬೇಡಿ ನೃಪರ ಸಂಹರಿಸಿದ ಆದಿ ಮೂರುತಿಗೆ ಆರತಿ ಎತ್ತಿರೆ ||೧||

ಇಂದುವದನೆ ಕೂಡಿ ಅರಣ್ಯ ಚಲಿಸಿ ನಂದಗೋಕುಲದಲ್ಲಿ ನಲಿದವಗೆ
ಮಂದಗಮನೆಯರ ಮುಂದೆ ನಿರ್ವಾಣದಿ ನಿಂದ ಮೂರುತಿಗೆ ಆರತಿ ಎತ್ತಿರೆ ||೨||

ತುರಗವನೇರಿ ದೈತ್ಯರ ಸೀಳಿ ಸುಜನರ ಪೊರೆವ ಮಂಗಳ ಹಯವದನನಿಗೆ
ವೇಲಾಪುರದ ಚೆನ್ನಿಗರಾಯನ ಚರಣಕಮಲಕೆ ಆರತಿ ಎತ್ತಿರೆ ||೩||

AnaMdamayage cinmayage shrImannaaraayaNage Arati ettire ||pa||

vEdava taMdu beTTava pottu dharaNiya saadhisi kaMbhadi baMdavage
bhUdaanava bEDi nRupara saMharisida Adi mUrutige Arati ettire ||1||

iMduvadane kUDi araNya calisi naMdagOkuladalli nalidavage
maMdagamaneyara muMde nirvaaNadi niMda mUrutige Arati ettire ||2||

turagavanEri daityara sILi sujanara poreva maMgaLa hayavadananige
vElaapurada chennigaraayana charaNakamalake Arati ettire ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru