ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಾರೋ ನಮ್ಮ ಮನೆಗೆ ಶ್ರೀ ರಾಘವೇಂದ್ರ | ಶ್ರೀ ಮಧ್ವೇಶ ವಿಠಲ |Baaro Namma Manege | Sri Madhwesha Vittala


ರಚನೆ : ಶ್ರೀ ಮಧ್ವೇಶ ವಿಠಲ ದಾಸರು 
Krithi : Sri Madhwesha Vittala Dasaru


ಬಾರೋ ನಮ್ಮ ಮನೆಗೆ ಶ್ರೀ ರಾಘವೇಂದ್ರ ||ಪ||

ಬಾರೋ ದು:ಖಾಪಹಾರ ಬಾರೋ ದುರಿತ ದೂರ
ಬಾರಯ್ಯ ಸನ್ಮಾರ್ಗ ದಾರಿ ತೋರುವ ಗುರು ||ಅಪ||

ಬಾಲ ಪ್ರಹ್ಲಾದನಾಗಿ ಖೂಳ ಕಶ್ಯಪುವಿಗೆ
ಲೋಲ ಶ್ರೀ ನರಹರಿಯ ಕಾಲ ರೂಪವ ತೋರ್ದ ||೧||

ವ್ಯಾಸ ನಿರ್ಮಿತ ಗ್ರಂಥ ಮಧ್ವ ಕೃತ ಭಾಷ್ಯವ
ಬೇಸರದೆ ಓದಿ ಮೆರೆವ ವ್ಯಾಸಮುನಿಯೇ  ||೨||

ಮಂತ್ರ ಗೃಹದೊಳು ನಿಂತ ಸುಯತಿವರ್ಯ
ಅಂತ ತಿಳಿಯದೊ ಎನ್ನಂತರಂಗದೊಳು    ||೩||

ಭೂತ ಪ್ರೇತಾದಿಗಳ ಘಾತಿಸಿಬಿಡುವಂತ
ಖ್ಯಾತಿಯುತ ಯತಿನಾಥನೆ ಸ್ತುತಿಸುವೆ ||೪||

ಕುಷ್ಟರೋಗಾದಿಗಳ ನಷ್ಟ ಮಾಡುವಂಥ
ಅಷ್ಟಮಹಿಮೆಯುತ ಶ್ರೇಷ್ಠ ಮುನಿಯೇ ||೫||

ಕರೆದರೆ ಬರುವಿಯೆಂಬೊ ಕೀರುತಿ ಕೇಳಿನಾ
ಕರೆದೆನೋ ಕರುಣದಿ ಕರವ ಪಿಡಿಯೋ ಬೇಗ ||೬||

ಭಕ್ತ ವತ್ಸಲನೆಂಬೊ ಬಿರುದು ನಿಂದಾದರೆ
ಅಶಕ್ತನ ಮೊರೆ ಕೇಳಿ ಮಧ್ವೇಶ ವಿಠಲ ದಾಸಾ ||೭||

baarO namma manege SrI raaGavEMdra ||pa||

baarO du:Kaapahaara baarO durita dUra
baarayya sanmaarga daari tOruva guru ||apa||

baala prahlaadanaagi khULa kaSyapuvige
lOla SrI narahariya kaala rUpava tOrda ||1||

vyaasa nirmita graMtha madhva kRuta bhaaShyava
bEsarade Odi mereva vyaasamuniyE  ||2||

maMtra gRuhadoLu niMta suyativarya
aMta tiLiyado ennaMtaraMgadoLu    ||3||

bhUta prEtaadigaLa GaatisibiDuvaMta
khyaatiyuta yatinaathane stutisuve ||4||

kuShTarOgaadigaLa naShTa maaDuvaMtha
aShTamahimeyuta SrEShTha muniyE ||5||

karedare baruviyeMbo kIruti kELinaa
karedenO karuNadi karava piDiyO bEga ||6||

bhakta vatsalaneMbo birudu niMdaadare
aSaktana more kELi madhvESa viThala daasaa ||7||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru