ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಂದು ನಿಂದಾ ಕಣ್ಣ | ಶ್ರೀ ವಿಜಯ ದಾಸರು | Bandu Ninda Kanna | Sri Vijaya Dasaru


ರಚನೆ : ಶ್ರೀ ವಿಜಯ ದಾಸರು
Kruti: Sri Vijaya Dasaru


ಬಂದು ನಿಂದಾ ಕಣ್ಣ ಮುಂದೆ ಬಂದು ನಿಂದಾ ||ಪ||

ಬಂದು ನಿಂದ ನಿಂದು ಭಾಗವತರ ಪ್ರಿಯಾ 
ಕಂದರ್ಪಜನಕ ಶ್ರೀ ಕರುಣಾ ಸಾಗರ ಮೂರ್ತಿ ||ಅಪ||

ಕುಟಿಲ ಕುಂತಲ ದೇವ ವಟು ವೇಷದಿಂದಲಿ
ನಟನೆ ಮಾಡುತ ದಿವ್ಯಪಟು ತರದಲಿ ತಾನು ||೧||

ಮುರಳಿಯನೂದುತ್ತ ಮರುಳುಗೊಳಿಸಿ ಜನರ
ಕೊರಳ ಪದಕ ಹಾರ ಧರಿಸಿ ತಾ ನಲಿಯುತ ||೨||

ಸುಜನರ ಪೊರೆಯುವ ಕುಜನರ ತರಿಯುವ
ವಿಜಯಸಾರಥಿ ದಿವ್ಯ ವಿಜಯವಿಠಲರೇಯಾ ||೩||


baMdu niMdaa kaNNa muMde baMdu niMdaa ||pa||

baMdu niMda niMdu bhaagavatara priyaa 
kaMdarpajanaka shrI karuNaa saagara mUrti ||apa||

kuTila kuMtala dEva vaTu vEShadiMdali
naTane maaDuta divyapaTu taradali taanu ||1||

muraLiyanUdutta maruLugoLisi janara
koraLa padaka haara dharisi taa naliyuta ||2||

sujanara poreyuva kujanara tariyuva
vijayasaarathi divya vijayaviThalarEyaa ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru