ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಜಯಗಳು ಆಗಲಿ ಅಪಜಯ ಪೋಗಲಿ | ಶ್ರೀ ಮೋಹನದಾಸರು | Jayagalu Agali | Sri Mohana Dasaru


ರಚನೆ : ಶ್ರೀ ಮೋಹನ ದಾಸರು 
Krithi : Sri Mohana Dasaru


ಜಯಗಳು ಆಗಲಿ ಅಪಜಯ ಪೋಗಲಿ 
ಜಯದೇವಿ ರಮಣ ಒಲಿಯಲಿ ಕೋಲೆ
ಜಯದೇವಿ ರಮಣ ಒಲಿಯಲಿ ನಮ್ಮ
ವಿಜಯರಾಯರ ಕೀರ್ತಿ ಮೆರೆಯಲಿ ಕೋಲೆ ||೧||

ಹರಿಯೇ ಸರ್ವೋತ್ತಮ ಹರಿಯೇ ಪರದೇವತೆ 
ಹರಿದಾಸರೆಂಬೋ ಬಿರುದಿನ ಕೋಲೆ |
ಹರಿದಾಸರೆಂಬೋ ಬಿರುದಿನ ಹೆಗ್ಗಾಳೆ
ಹಿರಿಬಾಗಿಲೊಳು ನುಡಿಸೇವು ಕೋಲೆ ||೨||

ಪನ್ನಂಗಶಯನ ಸುಪರ್ಣ ಗಿರೀಶ ಸುಪರ್ಣ 
ವಾಹನ ಸುಖಪೂರ್ಣ ಕೋಲೆ
ಸುಪರ್ಣವಾಹನ ಸುಖಪೂರ್ಣನಾದ 
ಮೋಹನ್ನ ವಿಠ್ಠಲ ಕರುಣಿಸು ಕೋಲೆ ||೩||

jayagaLu Agali apajaya pOgali 
jayadEvi ramaNa oliyali kOle
jayadEvi ramaNa oliyali namma
vijayarAyara kIrti mereyali kOle ||1||

hariyE sarvOttama hariyE paradEvate 
haridAsareMbO birudina kOle |
haridAsareMbO birudina heggALe
hiribAgiloLu nuDisEvu kOle ||2||

pannaMgaSayana suparNa girISa suparNa 
vAhana suKapUrNa kOle
suparNavAhana suKapUrNanAda 
mOhanna viThThala karuNisu kOle ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru