ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಮಧುರವು ಮಥುರನಾಥನ ನಾಮ | ಶ್ರೀ ವಿದ್ಯಾಪ್ರಸನ್ನ ತೀರ್ಥರ ಕೃತಿ | Madhuravu Mathura | Sri Vidyaprasanna Teertha


ಸಾಹಿತ್ಯ : ಶ್ರೀ ವಿದ್ಯಾಪ್ರಸನ್ನ ತೀರ್ಥರು 
Kruti : Sri Vidyaprasanna Teertharu


ಮಧುರವು ಮಥುರನಾಥನ ನಾಮ ||ಪ||
ದಧಿ ಮಧು ದ್ರಾಕ್ಷಾ ಸುಧೆ ರಸಗಳಿಗಿಂತ ||ಅಪ||

ಸುಂದರ ವದನನ ಅರವಿಂದ ನಯನನ
ನಂದಕುಮಾರನ ಚೆಂದದನಾಮವು ||೧||

ಯದುಕುಲ ತಿಲಕನ ಸದಮಲ ಚರಿತನ
ಮದನ ಪಿತನ ನಾಮ ಮುದದಲಿ ಪಾಡಲು ||೨||

ಗಾನವಿಲೋಲನ ದಾನವ ಕಾಲನ 
ಲೀಲೆಗಳನು ಸದಾ ಲಾಲಿಸಿ ಪೊಗಳಲು ||೩||

ಹೇಮವಸನನ ಕೋಮಲರೂಪನ
ಭಾಮ ಕಾಂತನ ಪ್ರೇಮದ ನಾಮವು ||೪||

ಪನ್ನಗಶಯನನ ಚಿನ್ಮಯರೂಪನ
ಸನ್ನುತಿಸಲಿಕ್ಕೆ ಪ್ರಸನ್ನನನಾಮವು ||೫||

madhuravu mathuranaathana naama ||pa||
dadhi madhu draakShaa sudhe rasagaLigiMta ||apa||

suMdara vadanana araviMda nayanana
naMdakumaarana ceMdadanaamavu ||1||

yadukula tilakana sadamala caritana
madana pitana naama mudadali paaDalu ||2||

gaanavilOlana daanava kaalana 
lIlegaLanu sadaa laalisi pogaLalu ||3||

hEmavasanana kOmalarUpana
bhaama kaaMtana prEmada naamavu ||4||

pannagaSayanana cinmayarUpana
sannutisalikke prasannananaamavu ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru