ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಮುಳ್ಳು ಕೊನೆಯ ಮೇಲೆ | ಶ್ರೀ ಪುರಂದರ ವಿಠಲ | Mullu Koneya Mele | Sri Purandara Dasara Kruti


ರಚನೆ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಮುಳ್ಳು ಕೊನೆಯ ಮೇಲೆ ಮೂರು ಕೆರೆಯ ಕಟ್ಟಿ 
ಎರಡು ತುಂಬದು ಒಂದು ತುಂಬಲೇ ಇಲ್ಲ ||ಪ||

ತುಂಬಲಿಲ್ಲದ ಕೆರೆಗೆ ಬಂದರು ಮೂವರು ವಡ್ಡರು 
ಇಬ್ಬರು ಕುಂಟರು ಒಬ್ಬಗೆ ಕಾಲೇ ಇಲ್ಲ ||ಅಪ||

ಕಾಲಿಲ್ಲದ ವಡ್ಡಗೆ ಕೊಟ್ಟರು ಮೂರು ಎಮ್ಮೆಗಳ 
ಎರಡು ಬರಡು ಒಂದಕೆ ಕರುವೇ ಇಲ್ಲ ||
ಕರುವಿಲ್ಲದ ಎಮ್ಮೆಗೆ ಕೊಟ್ಟರು ಮೂರು ಹೊನ್ನುಗಳ |
ಎರಡು ಸವಕಲು ಒಂದು ಸಲ್ಲಲೇ ಇಲ್ಲ ||೧||

ಸಲ್ಲದಿದ್ದ ಹೊನ್ನಿಗೆ ಬಂದರು ಮೂವರು ನೋಟಗಾರರು |
ಇಬ್ಬರು ಕುರುಡರು ಒಬ್ಬಗೆ ಕಣ್ಣೇ ಇಲ್ಲ ||
ಕಣ್ಣಿಲ್ಲದ ನೋಟಗಾರಗೆ ಕೊಟ್ಟರು ಮೂರು ಊರುಗಳ |
ಎರಡು ಹಾಳು ಒಂದಕೆ ಒಕ್ಕಲೇ ಇಲ್ಲ ||೨||

ಒಕ್ಕಲಿಲ್ಲದ ಊರಿಗೆ ಬಂದರು ಮೂವರು ಕುಂಬಾರರು
ಇಬ್ಬರು ಚೊಂಚರು ಒಬ್ಬಗೆ ಕೈಯೇ ಇಲ್ಲ ||
ಕೈಯಿಲ್ಲದ ಕುಂಬಾರನು ಮಾಡಿದ ಮೂರು ಮಡಕೆಗಳ |
ಎರಡು ಒಡಕು ಒಂದಕೆ ಬುಡವೇ ಇಲ್ಲ ||೩||

ಬುಡವಿಲ್ಲದ ಮಡಕೆಗೆ ಹಾಕಿದರು ಮೂರಕ್ಕಿ ಕಾಳ 
ಎರಡು ಬೇಯದು ಒಂದು ಬೇಯಲೇ ಇಲ್ಲ ||
ಬೇಯಲಿಲ್ಲದ ಅಕ್ಕಿಗೆ ಬಂದರು ಮೂವರು ನೆಂಟರು 
ಇಬ್ಬರು ಉಣ್ಣರು ಒಬ್ಬಗೆ ಹಸಿವೇ ಇಲ್ಲ ||೪||

ಹಸಿವಿಲ್ಲದ ನೆಂಟಗೆ ಕೊಟ್ಟರು ಮೂರು ಟೊಣಪೆಗಳ
ಎರಡು ತಾಕದು ಒಂದು ತಾಕಲೇ ಇಲ್ಲ ||
ತಾಕಲಿಲ್ಲದ ಟೊಣಪೆಯ ತಾಕಿಸಿ ಸದ್ಗತಿಯನ್ನು ಈಯಬೇಕು
ಪುರಂದರ ವಿಠಲರಾಯ ||೫||

muLLu koneya mEle mUru kereya kaTTi 
eraDu tuMbadu oMdu tuMbalE illa ||pa||

tuMbalillada kerege baMdaru mUvaru vaDDaru 
ibbaru kuMTaru obbage kAlE illa ||apa||
 
kAlillada vaDDage koTTaru mUru emmegaLa 
eraDu baraDu oMdake karuvE illa ||
karuvillada emmege koTTaru mUru honnugaLa |
eraDu savakalu oMdu sallalE illa ||1||
 
salladidda honnige baMdaru mUvaru nOTagAraru |
ibbaru kuruDaru obbage kaNNE illa ||
kaNNillada nOTagaarage koTTaru mUru UrugaLa |
eraDu hALu oMdake okkalE illa ||2||
 
okkalillada Urige baMdaru mUvaru kuMbAraru
ibbaru coMcaru obbage kaiyE illa ||
kaiyillada kuMbAranu mADida mUru maDakegaLa |
eraDu oDaku oMdake buDavE illa ||3||
 
buDavillada maDakege hAkidaru mUrakki kALa 
eraDu bEyadu oMdu bEyalE illa ||
bEyalillada akkige baMdaru mUvaru neMTaru 
ibbaru uNNaru obbage hasivE illa ||4||
 
hasivillada neMTage koTTaru mUru ToNapegaLa
eraDu tAkadu oMdu tAkalE illa ||
tAkalillada ToNapeya tAkisi sadgatiyannu IyabEku
puraMdara viThalarAya ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru