ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನಾರಾಯಣ ನಿನ್ನ ನಾಮದ | ಶ್ರೀ ಪುರಂದರ ದಾಸರು | Narayana Ninna Namada | Sri Purandara Dasara Kruti


ರಚನೆ : ಶ್ರೀ ಪುರಂದರ ದಾಸರು 
Krithi : Sri Purandara Dasaru


ನಾರಾಯಣ ನಿನ್ನ ನಾಮದ ಸ್ಮರಣೆಯ 
ಸಾರಾಮೃತವೆನ್ನ ನಾಲಿಗೆಗೆ ಬರಲಿ ||ಪ||

ಕೂಡುವಾಗಲು ನಿಂತಾಡುವಾಗಲು ಮತ್ತೆ
ಹಾಡುವಾಗಲು ಹರಿದಾಡುವಾಗಲು
ಖೋಡಿ ವಿನೋದದಿ ನೋಡದೆ ನಾ ಬಲು
ಮಾಡಿದ ಪಾಪ ಬಿಟ್ಟೋಡಿ ಹೋಗೊ ಹಾಂಗೆ ||೧||

ಊರಿಗೆ ಹೋಗಲಿ ಊರೊಳಗಿರಲಿ
ಕರಣಾರ್ಥಂಗಳೆಲ್ಲ ಕಾದಿರಲಿ
ವಾರಿಜನಾಭ ನರಸಾರಥಿ ನಿನ್ನನು
ಸಾರಿಸಾರಿಗೆ ನಾ ಬೇಸರದ್ಹಾಂಗೆ ||೨||

ಹಸಿವು ಇದ್ದಾಗಲಿ ಹಸಿವಿಲ್ಲದಾಗಲಿ
ಕಸವಿಸಿಯಿರಲಿ ಹರುಷವಿರಲಿ 
ವಸುದೇವಾತ್ಮಜ ಶಿಶುಪಾಲಕ್ಷಯ
ಅಸುರಾಂತಕ ನಿನ್ನ ಹೆಸರು ಮರೆಯದ್ಹಾಂಗೆ ||೩||

ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ
ಎಷ್ಟಾದರು ಮತಿಗೆಟ್ಟಿರಲಿ
ಕೃಷ್ಣ ಕೃಷ್ಣ ಎಂದು ಶಿಷ್ಟರು ಪೇಳುವ
ಅಷ್ಟಾಕ್ಷರ ಮಹಾಮಂತ್ರದ ನಾಮದ ||೪||

ಕನಸಿನೊಳಗಾಗಲಿ ಕಳವಳಿಕಾಗಲಿ
ಮನಸುಗೊಟ್ಟಿರಲಿ ಮುನಿದಿರಲಿ
ಜನಕಜಾಪತಿ ನಿನ್ನ ಚರಣಕಮಲವನು
ಮನಸಿನೊಳಗೆ ಒಮ್ಮೆ ನೆನಸಿಕೊಳ್ಳುವ ಹಾಗೆ ||೫||

ಜ್ವರ ಬಂದಾಗಲು ಚಳಿ ಬಂದಾಗಲು
ಮರಳಿ ಮರಳಿ ಮತ್ತೆ ನಡುಗುವಾಗ
ಹರಿನಾರಾಯಣ ದುರಿತನಿವಾರಣೆಂದು
ಇರುಳು ಹಗಲು ನಿನ್ನ ಸ್ಮರಣೆ ಮರೆಯದಂತೆ ||೬||

ಸಂತತ ಹರಿ ನಿನ್ನ ಸಾಸಿರನಾಮವ
ಅಂತರಂಗದಾ ಒಳಗಿರಿಸಿ
ಎಂತೋ ಪುರಂದರವಿಟ್ಠಲರಾಯನೆ
ಅಂತ್ಯಕಾಲದಲಿ ಚಿಂತಿಸೊ ಹಾಂಗೆ ||೭||

naaraayaNa ninna naamada smaraNeya
saaraamRutavenna naaligege barali ||pa||

kUDuvaagalu niMtaaDuvaagalu matte
haaDuvaagalu haridaaDuvaagalu
khODi vinOdadi nODade naa balu
maaDida paapa biTTODi hOgo haaMge ||1||

Urige hOgali UroLagirali
karaNaarthaMgaLella kaadirali
vaarijanaabha narasaarathi ninnanu
saarisaarige naa bEsarad~haaMge ||2||

hasivu iddaagali hasivilladaagali
kasavisiyirali haruShavirali
vasudEvaatmaja SiSupaalakShaya
asuraaMtaka ninna hesaru mareyad~haaMge ||3||

kaShTadallirali utkRuShTadallirali
eShTaadaru matigeTTirali
kRuShNa kRuShNa eMdu SiShTaru pELuva
aShTaakShara mahaamaMtrada naamada ||4||

kanasinoLagaagali kaLavaLikaagali
manasugoTTirali munidirali
janakajaapati ninna caraNakamalavanu
manasinoLage omme nenasikoLLuva haage ||5||

jvara baMdaagalu caLi baMdaagalu
maraLi maraLi matte naDuguvaaga
harinaaraayaNa duritanivaaraNeMdu
iruLu hagalu ninna smaraNe mareyadaMte ||6||

saMtata hari ninna saasiranaamava
aMtaraMgadaa oLagirisi
eMtO puraMdaraviTThalaraayane
aMtyakaaladali ciMtiso haaMge ||7||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru