ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ದಿಮ್ಮಿಸಾಲೆ ರಂಗ | ಶ್ರೀ ವಾದಿರಾಜರ ಕೃತಿ | Dimmisale Ranga | Sri Vadirajaru


ರಚನೆ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ದಿಮ್ಮಿಸಾಲೆ ರಂಗ ದಿಮ್ಮಿಸಾಲೆ
ದಿಮ್ಮಿಸಾಲೆನ್ನಿರೊ ಗೋಮಕ್ಕಳೆಲ್ಲ ನೆರೆದು ||ಪ||
ಗೋಪಾಂಗನೇರ ಮೇಲೆ ಒಪ್ಪಿ ಭಸ್ಮ ಸೂಸುತ ||ಅಪ||

ಶಂಖನಾದ ಕೊಳಲು ಭೇರಿ ಪೊಂಕದಿ ಪಂಚಮಹಾವಾದ್ಯದಿ
ಅಂಕವತ್ಸಲನ ನಿರಾತಂಕದಿಂದ ಹಿಡಿವ ಬನ್ನಿ ||೧||

ಗಂಧ ಕಸ್ತೂರಿ ಪುನುಗು ಚೆಂದದಿಂದ ಲೇಪ ಮಾಡಿ
ನಂದಗೋಪಸುತನ ಮೇಲೆ ತಂದು ಸೂಸಿ ಭಸ್ಮವ ||೨||

ಎರಳೆಗಣ್ಣಿನ ಬಾಲೇರು ಹರುಷದಿಂದ ಬಂದು ನಿಂತು
ವರದ ಕೇಶವನ ಮೇಲೆ ಪರಿದು ಸೂಸಿ ಭಸ್ಮವ ||೩||

ಮತ್ತೆ ಕುಶಲದ ಬಾಲೆಯರು ಎತ್ತರದಲಿ ಬಂದು ನಿಂತು
ಚಿತ್ತಜನಯ್ಯನ ಮೇಲೆತ್ತಿ ಸೂಸಿ ಭಸ್ಮವ ||೪||

ವಾದಿರಾಜಗೊಲಿದು ಬಂದು ಸೋದೆಪುರದಲ್ಲಿ ನಿಂದ
ಮೋದಿ ಹಯವದನನ ಮೇಲೆ ಪರಿದು ಸೂಸಿ ಭಸ್ಮವ ||೫||

dimmisaale raMga dimmisaale
dimmisaalenniro gOmakkaLella neredu ||pa||
gOpaaMganEra mEle oppi bhasma sUsuta ||apa||

SaMkhanaada koLalu bhEri poMkadi paMcamahaavaadyadi
aMkavatsalana niraataMkadiMda hiDiva banni ||1||

gaMdha kastUri punugu ceMdadiMda lEpa maaDi
naMdagOpasutana mEle taMdu sUsi bhasmava ||2||

eraLegaNNina baalEru haruShadiMda baMdu niMtu
varada kESavana mEle paridu sUsi bhasmava ||3||

matte kuSalada baaleyaru ettaradali baMdu niMtu
cittajanayyana mEletti sUsi bhasmava ||4||

vaadiraajagolidu baMdu sOdepuradalli niMda
mOdi hayavadanana mEle paridu sUsi bhasmava ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru