ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕೃಷ್ಣಮೂರುತಿ ಕಣ್ಣಮುಂದೆ | ಶ್ರೀ ಪುರಂದರವಿಠಲ | Krishna Mooruthi | Sri Purandara Vithala


ರಚನೆ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಕೃಷ್ಣಮೂರುತಿ ಕಣ್ಣಮುಂದೆ ನಿಂತಂತೆ ಇದೆ ||ಪ|| 

ಕಷ್ಟಗಳೆಲ್ಲವ ಪರಿಹರಿಸಿ ಮನ-
ದಿಷ್ಟಾರ್ಥಗಳನೆಲ್ಲ ಕೊಟ್ಟು ರಕ್ಷಿಸುವ ||ಅಪ|| 

ಮಸ್ತಕದಲಿ ಮಾಣಿಕ್ಯದ ಕಿರೀಟ | 
ಕಸ್ತೂರಿತಿಲಕದಿ ಹೊಳೆವ ಲಲಾಟ | 
ಹಸ್ತದಿ ಕೊಳಲೂದುವ ಓರೆನೋಟ | 
ಕೌಸ್ತುಭ ಎಡಬಲದಲ್ಲಿ ಓಲ್ಯಾಟ ||೧|| 

ಮಘಮಘಿಸುವ ಸೊಬಗಿನ ಸುಳಿಗುರುಳು | 
ಚಿಗುರುತುಲಸಿವನಮಾಲೆಯ ಕೊರಳು | 
ಬಗೆಬಗೆ ಹೊನ್ನುಂಗುರವಿಟ್ಟ ಬೆರಳು | 
ಸೊಗಸಿನ ನಾಭಿಯು ತಾವರೆಯರಳು ||೨|| 

ಉಡುದಾರ ವಡ್ಯಾಣ ಸಕಲಾಭರಣ | 
ಬೆಡಗುಪೀತಾಂಬರ ಶತರವಿಕಿರಣ | 
ಕಡಗ ಗಗ್ಗಗೆ ಪೆಂಡೆಯನಿಟ್ಟ ಚರಣ | 
ಒಡೆಯ ಪುರಂದರವಿಠಲನ ಕರುಣ ||೩||

kRuShNamUruti kaNNamuMde niMtaMte ide ||pa|| 

kaShTagaLellava pariharisi mana-
diShTArthagaLanella koTTu rakShisuva ||apa|| 

mastakadali mANikyada kirITa | 
kastUritilakadi hoLeva lalATa | 
hastadi koLalUduva OrenOTa | 
kaustuBa eDabaladalli OlyATa ||1|| 

maGamaGisuva sobagina suLiguruLu | 
cigurutulasivanamAleya koraLu | 
bagebage honnuMguraviTTa beraLu | 
sogasina nABiyu tAvareyaraLu ||2|| 

uDudAra vaDyANa sakalABaraNa | 
beDagupItAMbara SataravikiraNa | 
kaDaga gaggage peMDeyaniTTa caraNa | 
oDeya puraMdaraviThalana karuNa ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru