ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಮುತ್ತು ಬಂದಿದೆ ಕೇರಿಗೆ | ಶ್ರೀ ಕನಕದಾಸರ ಕೃತಿ | Muttu Bandide Kerige | Sri Kanaka Dasaru


ಸಾಹಿತ್ಯ : ಶ್ರೀ ಕನಕದಾಸರು
Kruti: Sri Kanaka Dasaru


ಮುತ್ತು ಬಂದಿದೆ ಕೇರಿಗೆ ಜನರೆಲ್ಲ ಕೇಳಿ ||ಪ||
ಭಕ್ತಿಯುಳ್ಳವರೆಲ್ಲ ಕಟ್ಟಿಕೊಳ್ಳಿ ಸೆರಗಿನಲ್ಲಿ ||ಅಪ||

ಥಳಥಳಿಸುವ ಮುತ್ತು ಕಮಲನೇತ್ರದ ಮುತ್ತು
ಕಲುಷಪರ್ವತಕಿದು ಕುಲಿಶವಾಗಿಪ್ಪ ಮುತ್ತು
ಹಲಧರಾನುಜನೆಂಬ ಪವಿತ್ರ ನಾಮದ ಮುತ್ತು
ಒಲಿದು ಭಜಿಪರ ಭವ ತರಿದು ಕಾಯುವ ಮುತ್ತು ||೧||

ಅಂಜದಿದ್ದವರಿಗೆ ಅಂಜಿಕೆ ತೋರುವ ಮುತ್ತು
ಭಂಜಿಸಿದ ಇತರ ಭಯವ ತೋರುವ ಮುತ್ತು
ಸಂಜೀವರಾಯರ ಹೃದಯದೊಳಗಿನ ಮುತ್ತು
ಕಂಜಭವಾದಿಗಳು ಶಿರಸಾ ವಹಿಸುವ ಮುತ್ತು ||೨||

ಜ್ಞಾನವೆಂಬೊ ದಾರದಲ್ಲಿ ಪೋಣಿಸುವ ಮುತ್ತು
ಜ್ಞಾನಿಗಳ ಮನದಲ್ಲಿ ಮೆರೆವ ಮುತ್ತು
ಆನಂದತೀರ್ಥರ ಮನದಳೊಪ್ಪುವ ಮುತ್ತು
ಶ್ರೀನಿಧಿ ಆದಿಕೇಶವನೆಂಬೊ ಆಣಿಮುತ್ತು ||೩||

muttu baMdide kErige janarella kELi ||pa||
bhaktiyuLLavarella kaTTikoLLi seraginalli ||apa||

thaLathaLisuva muttu kamalanEtrada muttu
kaluShaparvatakidu kuliSavaagippa muttu
haladharaanujaneMba pavitra naamada muttu
olidu bhajipara bhava taridu kaayuva muttu ||1||

aMjadiddavarige aMjike tOruva muttu
bhaMjisida itara bhayava tOruva muttu
saMjIvaraayara hRudayadoLagina muttu
kaMjabhavaadigaLu Sirasaa vahisuva muttu ||2||

j~jaanaveMbo daaradalli pONisuva muttu
j~jaanigaLa manadalli mereva muttu
AnaMdatIrthara manadaLoppuva muttu
SrInidhi AdikESavaneMbo ANimuttu ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru